ಬೆಂಗಳೂರು : ಕೋಲಾರದಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ ನಾಲ್ಕು ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ನಾಲ್ಕು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನರ್ಸ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 4
ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
ನೇಮಕಾತಿ ವಿಧಾನ: ನೇರ ಸಂದರ್ಶನ
ಹುದ್ದೆಗಳ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಸಂದರ್ಶನದ ದಿನಾಂಕ: ಫೆಬ್ರವರಿ 10
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಎಂ.ಫಿಲ್ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗಲು ಗರಿಷ್ಠ 40 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಇದರೊಂದಿಗೆ ಕೋಲಾರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸುದ್ದಿ ದೊರಕಿದಂತಾಗಿದೆ.
ಅಭ್ಯರ್ಥಿಗಳು ಮೊದಲು nimhans.ac.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಿಗದಿತ ದಿನದಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ನೇಮಕಾತಿ ಹೊಂದಿವರಿಗೆ ಮಾಸಿಕ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
Boardroom 4th Floor, NBRC Building Administrative Block, NIMHANS, Bengaluru–560029
ಇದನ್ನೂ ಓದಿ : ಜನಸಾಮಾನ್ಯರ ಜೇಬಿಗೆ ಮತ್ತೊಂದು ಬರೆ.. ಅಕ್ಕಿ-ಬೇಳೆ ಸೇರಿ ಹಲವು ದಿನಸಿ ಸಾಮಾಗ್ರಿಗಳ ಬೆಲೆ ಏರಿಕೆ!



















