ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ (NIRDPR Recruitment 2026) ಖಾಲಿ ಇರುವ 98 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ : ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR)
ಒಟ್ಟು ಹುದ್ದೆ: 98
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಸಂದರ್ಶನದ ದಿನಾಂಕ: ಜನವರಿ 29
10 ಸೀನಿಯರ್ ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟಂಟ್ ಹಾಗೂ 88 ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಜನರಲ್, ಒಬಿಸಿ ಹಾಗೂ ಇಡಬ್ಲ್ಯೂಎಸ್ ಸಮುದಾಯದವರಿಗೆ 300 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು nirdpr.org.in ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡ ಬಳಿಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ: ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 84 ಹುದ್ದೆಗಳ ನೇಮಕ | ಫ್ರೆಶರ್ ಗಳಿಗೆ ಗುಡ್ ನ್ಯೂಸ್



















