ಬೆಂಗಳೂರು: ಕರ್ನಾಟಕದ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕದಲ್ಲಿ (NIT Karnataka) ಖಾಲಿ ಇರುವ SRF, JRF ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಐದು ಹುದ್ದೆಗಳು ಖಾಲಿ ಇದ್ದು, ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜುಲೈ 10ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ/ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ವಯಸ್ಸಿನವರಾಗಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 16 ಸಾವಿರ ರೂಪಾಯಿಯಿಂದ 25 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದ ಎಲ್ಲ ಸಮುದಾಯದವರಿಗೆ 100 ರೂ. ಅರ್ಜಿ ಶುಲ್ಕವಿದೆ. ಅಧಿಸೂಚನೆ ಪ್ರಕಾರ, ದಾಖಲೆ ಪರಿಶೀಲನೆ, ಅರ್ಹತೆ, ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು ಅಧಿಕೃತ ವೆಬ್ಸೈಟ್ https://www.nitk.ac.in/ ಗೆ ಭೇಟಿ ನೀಡಬೇಕು. ಜೂನಿಯರ್ ರಿಸರ್ಚ್ ಫೆಲೋ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ. ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ. ಭರ್ತಿ ಮಾಡಲಾದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಹಾಜರಾಗಿ. ಸಂದರ್ಶನವು Center for System Design, NITK Surathkal ನಲ್ಲಿ ನಡೆಯಲಿದೆ.