ಬೆಂಗಳೂರು: ಕರ್ನಾಟಕದ ಮಂಗಳೂರಿನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ (NIT Karnataka Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸಿವಿಲ್ ಎಂಜಿನಿಯರ್ ಹುದ್ದೆಯ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ, ಕರ್ನಾಟಕ
ಹುದ್ದೆಯ ಹೆಸರು: ಸಿವಿಲ್ ಎಂಜಿನಿಯರ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 2
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಬಿಇ, ಬಿ ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ “ಮೇನ್ ಸೆಮಿನಾರ್ ಹಾಲ್, ಮೇನ್ ಬಿಲ್ಡಿಂಗ್, ಎನ್ಐಟಿಕೆ ಕರ್ನಾಟಕ” ವಿಳಾಸದಲ್ಲಿ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು associatedean.sw@nitk.edu.in ವಿಳಾಸಕ್ಕೆ ಮೇಲ್ ಮಾಡಬೇಕು
ಇದನ್ನೂ ಓದಿ: ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ



















