ಬೆಂಗಳೂರು: ಕರ್ನಾಟಕದ ಮಂಗಳೂರಿನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ (NIT Karnataka Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಯ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದು ಸೇರಿ ನೇಮಕಾತಿಗೆ ಸಂಬಂಧಿಸಿದ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ, ಕರ್ನಾಟಕ
ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 8
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು pgayathri@nitk.edu.in ವಿಳಾಸಕ್ಕೆ ಇ-ಮೇಲ್ ಮಾಡಬೇಕು
ಇದನ್ನೂ ಓದಿ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ತಿಂಗಳಿಗೆ 2.15 ಲಕ್ಷ ರೂ. ಭರ್ಜರಿ ಸಂಬಳ



















