ಬೆಂಗಳೂರು : ನೀವು ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕರ್ನಾಟಕದ ಸುರತ್ಕಲ್‌ನಲ್ಲಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Karnataka Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 12
ಅರ್ಜಿ ಸಲ್ಲಿಸುವ ವಿಧಾನ: ಇ-ಮೇಲ್
ಉದ್ಯೋಗ ಸ್ಥಳ: ಸುರತ್ಕಲ್
ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 37 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ, ದಾಖಲೆಗಳ ಸಾಫ್ಟ್ ಕಾಪಿಗಳನ್ನು skreddy@nitk.edu.in ಗೆ ಮೇಲ್ ಮಾಡಬೇಕು
ಇದನ್ನೂ ಓದಿ : ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!



















