ಬೆಂಗಳೂರು: ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೆ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕದ ಸುರತ್ಕಲ್ ನಲ್ಲಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Karnataka Recruitment 2025) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಗಳ ಹೆಸರು: ಟೆಕ್ನಿಕಲ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 15
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಸುರತ್ಕಲ್, ಕರ್ನಾಟಕ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿಟೆಕ್, ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು sharnappaj@nitk.edu.in ವಿಳಾಸಕ್ಕೆ ಮೇಲ್ ಮಾಡಬೇಕು
ಇದನ್ನೂ ಓದಿ: ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ಕೇಂದ್ರದ EIL ಸಂಸ್ಥೆಯಲ್ಲಿ 29 ಹುದ್ದೆಗಳ ನೇಮಕಾತಿ



















