ಬೆಂಗಳೂರು: ಕರ್ನಾಟಕದ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ (NIT Karnataka Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 5 ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ, ಕರ್ನಾಟಕ
ಹುದ್ದೆಯ ಹೆಸರು: ಲೈಬ್ರರಿ ಟ್ರೈನಿ
ಒಟ್ಟು ಹುದ್ದೆಗಳು: ಸುರತ್ಕಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 4
ಉದ್ಯೋಗ ಸ್ಥಳ: ಸುರತ್ಕಲ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಲ್ಐಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 26 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy Registrar (Administration) National Institute of Technology Karnataka (NITK), Surathkal Srinivasnagar Post, Mangal.


















