ಬೆಂಗಳೂರು: ಹರಿಯಾಣದ ಕುರುಕ್ಷೇತ್ರದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ 46 ಹುದ್ದೆಗಳ ನೇಮಕಾತಿಗಾಗಿ (NIT Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿ ಒಳ್ಳೆಯ ಉದ್ಯೋಗವನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಟೆಕ್ನಿಕಲ್ ಅಸಿಸ್ಟಂಟ್, ಜ್ಯೂನಿಯರ್ ಎಂಜಿನಿಯರ್, ಅಸಿಸ್ಟಂಟ್, ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಅಸಿಸ್ಟಂಟ್, ಪರ್ಸನಲ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 21,700 ರೂಪಾಯಿಯಿಂದ 1,12,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
Technical Assistant, Junior Engineer, and Assistant,
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕುರುಕ್ಷೇತ್ರ
ಒಟ್ಟು ಹುದ್ದೆಗಳು: 46
ಉದ್ಯೋಗ ಸ್ಥಳ: ಕುರುಕ್ಷೇತ್ರ, ಹರಿಯಾಣ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 30
ಪದವಿ, ಬಿಇ, ಬಿ.ಟೆಕ್, ಪಿಯುಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 27ರಿಂದ 33 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಕಂಪ್ಯೂಟರ್ ಆಧಾರಿತ ಟೆಸ್ಟ್, ಕೌಶಲಗಳ ಟೆಸ್ಟ್, ದಾಖಲೆ ಪರಿಶೀಲನೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಇಡಬ್ಲ್ಯೂಎಸ್, ಒಬಿಸಿಯವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ.



















