ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಮಣಿಪುರದಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Manipur Non Teaching Recruitment 2025) ಖಾಲಿ ಇರುವ 27 ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಎಂಜಿನಿಯರ್, ಟೆಕ್ನಿಕಲ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆಗಳು: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 27
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಮಣಿಪುರ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 20
ಜೂನಿಯರ್ ಎಂಜಿನಿಯರ್, ಟೆಕ್ನಿಕಲ್ ಅಸಿಸ್ಟಂಟ್, ಸೂಪರಿಂಟೆಂಡೆಂಟ್, ಸೀನಿಯರ್ ಅಸಿಸ್ಟಂಟ್, ಜೂನಿಯರ್ ಅಸಿಸ್ಟಂಟ್, ಟೆಕ್ನಿಶಿಯನ್, ಲ್ಯಾಬ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ, ಬಿ.ಟೆಕ್, ಪದವಿ, ಪಿಯುಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಕನಿಷ್ಠ 27ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 35 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ತುಟ್ಟಿ ಭತ್ಯೆ ಸೇರಿ ಹಲವು ಭತ್ಯೆಗಳನ್ನು ಕೂಡ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 1 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು https://services.iiitk.ac.in/Nitm_Staff_Rec/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.