ಬೆಂಗಳೂರು : ನೀವು ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕರ್ನಾಟಕದ ಸುರತ್ಕಲ್ ನಲ್ಲಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NIT Karnataka Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT)
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 30
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಸುರತ್ಕಲ್
ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ.ಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nitk.ac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ, ದಾಖಲೆಗಳ ಸಾಫ್ಟ್ ಕಾಪಿಗಳನ್ನು hrshwetha@nitk.edu.in ಗೆ ಮೇಲ್ ಮಾಡಬೇಕು
ಇದನ್ನೂ ಓದಿ : ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!


















