ಬೆಂಗಳೂರು: ಕೇಂದ್ರ ಸರ್ಕಾರದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ನೇಯ್ ವೇಲಿ ಲಿಗ್ನೈಟ್ ಕಾರ್ಪೊರೇಷನ್ ನಲ್ಲಿ (Neyveli Lignite Corporation) 163 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ಭರ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವುದು ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನೇಯ್ ವೇಲಿ ಲಿಗ್ನೈಟ್ ಕಾರ್ಪೊರೇಷನ್
ಹುದ್ದೆ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಬಿಕಾನೇರ್, ರಾಜಸ್ಥಾನ
ಸಂದರ್ಶನ ನಡೆಯುವ ದಿನಾಂಕ: ಅಕ್ಟೋಬರ್ 23
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಬಿ.ಎ, ಬಿ.ಕಾಂ, ಬಿಇ, ಬಿ ಟೆಕ್, ಐಟಿಐ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಟ್ರೇಡ್ ಅಪ್ರೆಂಟಿಸ್, ಟೆಕ್ನಿಶಿಯನ್ ಅಪ್ರೆಂಟಿಸ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ರಾಜಸ್ಥಾನದ ಬಿಕಾನೇರ್ ನಲ್ಲಿರುವ ಘಟಕದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿಯೇ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಈಗಷ್ಟೇ ಕೋರ್ಸ್ ಮುಗಿಸಿರುವವರಿಗೆ ತರಬೇತಿ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು nlcindia.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.