ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (NMDC Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಡೈರೆಕ್ಟರ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 20
ಅನುಭವ ಹಾಗೂ ವಿದ್ಯಾರ್ಹತೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿದವರಿಗೆ ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 57 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ.
ನೇಮಕಾತಿ ಹೊಂದಿದವರಿಗೆ ಮಾಸಿಕ 3 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nmdc.co.in ಗೆ ಭೇಟಿ ನೀಡಬೇಕು
ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ


















