ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Recruitment 2025) ಹೊರಡಿಸಲಾಗಿದೆ. ಚೀಫ್ ಎಂಜಿನಿಯರ್, ಸೀನಿಯರ್ ಡೆಪ್ಯುಟಿ ಸೆಕ್ರೆಟರಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಅಭ್ಯರ್ಥಿಗಳು ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್
ಹುದ್ದೆ ಹೆಸರು: ಚೀಫ್ ಎಂಜಿನಿಯರ್, ಸೀನಿಯರ್ ಡೆಪ್ಯುಟಿ ಸೆಕ್ರೆಟರಿ
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಹಾಗೂ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 15
ಚೀಫ್ ಎಂಜಿನಿಯರ್, ಸೀನಿಯರ್ ಡೆಪ್ಯುಟಿ ಸೆಕ್ರೆಟರಿ ಹಾಗೂ ಡೆಪ್ಯುಟಿ ಚೀಫ್ ಮೆಕ್ಯಾನಿಕಲ್ ಎಂಜಿನಿಯರ್ ವಿಭಾಗದಲ್ಲಿ ಖಾಲಿ ಇರುವ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿಯಿಂದ 2.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವವರು The Secretary, New Mangalore Port Trust ವಿಳಾಸಕ್ಕೆ ಕಳುಹಿಸಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು newmangaloreport.gov.in ಗೆ ಭೇಟಿ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ



















