ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Recruitment 2026) ಹೊರಡಿಸಲಾಗಿದೆ. ಹಲವು ಸೀನಿಯರ್ ಡೆಪ್ಯೂಟಿ ಟ್ರಾಫಿಕ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದು ಮಂಗಳೂರು, ಉಡುಪಿ ಭಾಗದವರಿಗೆ ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್
ಹುದ್ದೆ ಹೆಸರು: ಸೀನಿಯರ್ ಡೆಪ್ಯೂಟಿ ಟ್ರಾಫಿಕ್ ಮ್ಯಾನೇಜರ್
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 19
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 80 ಸಾವಿರ ರೂಪಾಯಿಯಿಂದ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ newmangaloreport.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ಲೈನ್ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಬಳಿಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ The Secretary, New Mangalore Port Authority, General Administration Department, Administrative Building, Panambur Mangalore-575010ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು secretary@nmpt.gov.in ಗೆ ಮೇಲ್ ಮಾಡಬಹುದು.
ಇದನ್ನೂ ಓದಿ : ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!



















