ಬೆಂಗಳೂರು : ನೀವು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಗಳಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Recruitment 2026) ಹೊರಡಿಸಲಾಗಿದೆ. 12 ಮ್ಯಾನೇಜರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 12
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 16
3 ಚೀಫ್ ಮ್ಯಾನೇಜರ್, 3 ಸೀನಿಯರ್ ಮ್ಯಾನೇಜರ್ ಹಾಗೂ 6 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ ಅಥವಾ ಬಿ.ಟೆಕ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.2 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ newmangaloreport.gov.in ಗೆ ಭೇಟಿ ನೀಡಬೇಕು
ಮ್ಯಾನೇಜರ್ ಹುದ್ದೆಗಳ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?



















