ಬೆಂಗಳೂರು : ನೀವು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಗಳಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ 19 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Recruitment 2026) ಹೊರಡಿಸಲಾಗಿದೆ. 19 ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್
ಹುದ್ದೆ ಹೆಸರು: ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಇತ್ಯಾದಿ
ಒಟ್ಟು ಹುದ್ದೆಗಳು: 19
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 4
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್, ಮೆರಿನ್ ಎಂಜಿನಿಯರ್, ಡೆಪ್ಯೂಟಿ ಡೈರೆಕ್ಟರ್, ಅಕೌಂಟ್ಸ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಜಿನಿಯರಿಂಗ್ ನಲ್ಲಿ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 450 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 40 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ newmangaloreport.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ಟ್ರೈನಿ ಕ್ಯಾಬಿನ್ ಕ್ರ್ಯೂ ನೇಮಕಾತಿಗೆ ಅರ್ಜಿ ಆಹ್ವಾನ!


















