ಬಾಗಲಕೋಟೆ: ಸಮಯಕ್ಕೆ ಸರಿಯಾಗಿ ಶಾಲಾ- ಕಾಲೇಜ್‌ಗೆ ತೆರಳಲು ಸರಿಯಾದ ಬಸ್ ವ್ಯವಸ್ಥೆ ಇಲ್ಲವೆಂದು ಆರೋಪಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಾದಾಮಿ ತಾಲೂಕಿನ ಗಂಗನಂಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ-ಅನವಾಲ ಬಸ್ ತಡೆದ ವಿದ್ಯಾರ್ಥಿಗಳು, ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಸುಮಾರು 6 ಗ್ರಾಮಗಳ ಪ್ರಯಾಣಿಕರಿಗೆ ಬೆಳಗ್ಗೆ ಒಂದೇ ಬಸ್ ಬಿಟ್ಟಿರುವುದರಿಂದ ನಿತ್ಯ ನೂರಾರು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಎರಡು ವರ್ಷಗಳಿಂದ ಹೆಚ್ಚುವರಿ ಬಸ್ ಬಿಡುವಂತೆ ಬಸ್ ಡಿಪೋ ಅಧಿಕಾರಿಗಳಿಗೆ ಮನವಿ ಮಾಡಿದರು. ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.