ಚನ್ನಮ್ಮನ ಕಿತ್ತೂರು: ಬಿಜೆಪಿಯ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್ ಶಾಸಕ ಬಾಬಾಸಾಹೇಬ ಪಾಟೀಲ್ ಹೇಳಿದ್ದಾರೆ.
ಕಾಂಗ್ರೆಸ್‌ನ ಶಾಸಕರಾದ ತಮ್ಮಯ್ಯ ಹಾಗೂ ಬಾಬಾಸಾಹೇಬ ಅವರಿಗೆ ಬಿಜೆಪಿ ಹಿರಿಯ ನಾಯಕರು 100 ಕೋಟಿ ರೂ. ಆಫರ್ ನೀಡಿದ್ದರು ಎಂಬ ಶಾಸಕ ರವಿ ಗಣಿಗ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕಾಗಿ ಬಿಜೆಪಿಯ ಹಿರಿಯ ನಾಯಕರು ನನ್ನನ್ನು ಸಂಪರ್ಕಿಸಿದ್ದು ಸತ್ಯ. ಆದರೆ, ಹಣದ ಆಮಿಷ ಮಾತ್ರ ಒಡ್ಡಿಲ್ಲ. ಸ್ಥಾನಮಾನ ನೀಡುವ ಕುರಿತು ಮಾತನಾಡಿದ್ದರು. ಈ ವಿಷಯವನ್ನು ನಮ್ಮ ನಾಯಕರ ಗಮನಕ್ಕೆ ತಂದಿದ್ದೇನೆ. ನನ್ನ ಕ್ಷೇತ್ರಕ್ಕೆ ನಮ್ಮ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಎಲ್ಲ ರೀತಿಯಿಂದಲೂ ನನಗೆ ಸಹಕಾರ ಸಿಕ್ಕಿದೆ. ನಾನು ಪಕ್ಷ ತೊರೆಯುವ ಮಾತೇ ಇಲ್ಲ ಎಂದಿದ್ದಾರೆ.