ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ಡಿಜಿಪಿ ಕೆ.ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದೆ. ಯಾವುದೇ ಇಲಾಖೆಯಲ್ಲಿಯೂ ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರಾಮಚಂದ್ರರಾವ್ ರಾಸಲೀಲೆ ಪ್ರಕರಣ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ರೀತಿ ವಿಡಿಯೋ ವೈರಲ್ ಆಗುತ್ತಿರುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಇಂಥದ್ದೆಲ್ಲ ಯಾವುದೇ ಇಲಾಖೆಯಲ್ಲಿಯೂ ಆಗಬಾರದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ ಹಿನ್ನೆಲೆ ಅಮಾನತು ಮಾಡಿ ಆದೇಶಿಸಲಾಗಿದೆ.
ಇದು ಸುಳ್ಳು ವಿಡಿಯೋ ಎಂದು ರಾಮಚಂದ್ರರಾವ್ ಹೇಳಿದ್ದನ್ನು ಗಮನಿಸಿದ್ದೇನೆ. ಅಂಥದ್ದೇನಾದಾರೂ ಇದ್ದರೆ ತನಿಖೆಯಲ್ಲಿ ತಿಳಿಯಲಿದೆ. ಆದರೆ ಮೇಲ್ನೋಟಕ್ಕೆ ಇಂಥ ವಿಚಾರಗಳು ಯಾರಿಗೂ ಶೋಭೆಯಲ್ಲ ಎಂದು ಹeಳಿದ್ದಾರೆ.
ರಾಮಚಂದ್ರ ರಾವ್ ಅವರನ್ನು ಬಂಧಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿರುವುದರ ಕುರಿತು ಪ್ರತಿಕ್ರಿಯಿಸಿ, ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮ ತೆಗೆದುಕೊಂಡಿದ್ದೇವೆ. ತನಿಖೆ ನಡೆಸಿದ ಬಳಿಕ ಏನು ಬೇಕಾದರೂ ಆಗಬಹುದು. ಅವರನ್ನು ಡಿಸ್ಮಿಸ್ ಸಹ ಮಾಡಬಹುದು. ಅಂಥ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ | ರಾಜ್ಯ ಮಹಿಳಾ ಆಯೋಗ ಆಗ್ರಹ!


















