ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಕನಸಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸದ್ಯಕ್ಕೆ ಸ್ಥಾಪನೆ ಇಲ್ಲ ಎಂದು ಹೈಕೋರ್ಟ್ ಗೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಬಿಬಿಎಂಪಿ ಕಟ್ಟಡ ಬೈಲಾ ಉಲ್ಲಂಘನೆ ವಿಚಾರಣೆ ವೇಳೆ, ಗ್ರೇಟರ್ ಬೆಂಗಳೂರು ಪಾಧಿಕಾರ ಜಾರಿ ಯಾವಾಗ ಮಾಡುತ್ತೀರಿ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.
ಹೈಕೋರ್ಟ್ ಗೆ ಪ್ರತಿಕ್ರಿಯಿಸಿದ ಶಶಿಕಿರಣ್ ಶೆಟ್ಟಿ, ಬಿಬಿಎಂಪಿಯನ್ನು 5 ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಐದು ಪಾಲಿಕೆಗಳಿಗೆ ಜನವರಿ ವೇಳೆಗೆ ಚುನಾವಣೆ ಸಾಧ್ಯತೆ ಇದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.



















