ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಶಾಸಕ ಸಿ.ಟಿ. ರವಿ ಅವರನ್ನು ಇಡೀ ರಾತ್ರಿ ಸುತ್ತಾಡಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ. ನಾವು ಯಾವುದೇ ಸೂಚನೆ ನೀಡಿಲ್ಲ ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಅವರನ್ನು ಪೊಲೀಸರು ಹಿರೇಬಾಗೇವಾಡಿ ಸ್ಟೇಷನ್ ಗೆ ಕರೆದುಕೊಂಡು ಹೋದಾಗ ಅಲ್ಲಿಗೆ ಬಿಜೆಪಿ ನಾಯಕರು ಹೋಗಿದ್ದಾರೆ. ಹೊರಗೆ ಸುತ್ತಾಡಿಸಿರೋದು ಗೊತ್ತಿಲ್ಲ. ಪೊಲೀಸರು ಎಲ್ಲವನ್ನೂ ಕೇಳಿಯೇ ಮಾಡಲ್ಲ. ಸಿಎಂ ಸೇರಿದಂತೆ ಯಾರೂ ಪೊಲೀಸರಿಗೆ ಸೂಚನೆ ನೀಡಿಲ್ಲ. ಅವರು ಎಲ್ಲವನ್ನೂ ಕೇಳಿ ಮಾಡಲ್ಲ. ತನಿಖೆ ನಡೆಸುವುದು ಅವರಿಗೆ ಗೊತ್ತಿರುತ್ತದೆ ಎಂದು ಹೇಳಇದ್ದಾರೆ.
ಸಿಟಿ ರವಿ ತಲೆಯಲ್ಲಿ ರಕ್ತ ಬಂದಿರುವ ವಿಚಾರ ನನಗೆ ಗೊತ್ತಿಲ್ಲ. ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಸಂಬಂಧಿಸಿದ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ ಎಂದಿದ್ದಾರೆ.