ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಗಲಭೆಗಳನ್ನು ಉಂಟುಮಾಡುವವರು, ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.
ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ
ನಾಳೆ ಮತ್ತು ನಾಡಿದ್ದು, ಎರಡು ದಿನಗಳ ಕಾಲ ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.