ಕೆಲವರು ತಮ್ಮ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಜನ ಸೊಂಬೇರಿಗಳಾಗುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಆದರೆ, ಅವರು ರಾಜಕೀಯದ ಹಿನ್ನೆಲೆಯಲ್ಲಿ ಹಾಗೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಸಲು ವಿಷಯವೆಂದರೆ ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಮಾರಿಗಳಾಗಿಲ್ಲ. ಇದು ಜನರಿಗೆ ತುಂಬಾ ಸಹಕಾರಿಯಾಗಿದೆ. ಬಡವರಿಗೆ ಅನ್ನಭಾಗ್ಯ ಆಸರೆಯಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ತಾನು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದು ಯಾಕೆ ಅನ್ನೋದನ್ನು ತಮ್ಮ ಬದುಕಿನ ಅನುಭವಗಳ ಮೂಲಕ ಹೇಳಿದ್ದಾರೆ.



















