ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿಯುತವಾಗಿ ಹೊಸ ವರ್ಷ ಸಂಭ್ರಮಾಚರಣೆ ನಡೆದಿದೆ. ಲಕ್ಷಾಂತರ ಜನರು ಹೊಸ ವರ್ಷದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಆದರೂ ಯಾವುದೇ ಅಹಿತಕರ ಘಟನೆ ರಾಜ್ಯದಲ್ಲಿ ನಡೆದಿಲ್ಲ. ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜನರೂ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ.
ಜನರು ಪೊಲೀಸರಿಗೆ ಎಲ್ಲ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಹೀಗಾಗಿ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಯುವಕರು ಎಲ್ಲಾ ಸಹಕಾರ ಕೊಟ್ಟಿದ್ದಾರೆ ಎಂದರು.
ರಾಜ್ಯದ ಅಭಿವೃದ್ದಿಗೆ ಹಾಗೂ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಲು ವಿರೋಧ ಪಕ್ಷಗಳು ಸಹಕಾರ ನೀಡಬೇಕು. ಟೀಕೆ ಮಾಡಿ, ಆದರೆ ಸಕರಾತ್ಮಕ ಇರಲಿ. ಸರ್ಕಾರಕ್ಕೆ ಸಲಹೆ ಸೂಚನೆ ನೀಡುವಂತೆ ಇರಲಿ ಎಂದು ಹೇಳಿದ್ದಾರೆ.