ಓಸ್ಲೋ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆಯಾಗಿದೆ. ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ದಿಟ್ಟ ಹೋರಾಟಗಾರ್ತಿ ವೆನಿಜುವೆಲಾದ ಉಕ್ಕಿನ ಮಹಿಳೆ ಎಂದೇ ಖ್ಯಾತಿ ಗಳಿಸಿರುವ ಮರಿಯಾ ಕೊರಿನಾ ಮಚಾಡೋಗೆ ಒಲಿದಿದೆ.
ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾಡೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.
ಈ ಮೂಲಕ ಕಳೆದ ಕೆಲವು ದಿನಗಳಿಂದ ನೊಬೆಲ್ ಪ್ರಶಸ್ತಿ ಸ್ಪರ್ಧೆಯಲ್ಲಿ ತನ್ನ ಪರ ಹಕ್ಕು ಚಲಾಯಿಸುತ್ತಿದ್ದ ಸ್ವಘೋಷಿತ ಶಾಂತಿದೂತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಣುತ್ತಿದ್ದ ನೊಬೆಲ್ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡಿದೆ.



















