ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು, ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಉತ್ತರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ (South Central Railway Recruitment 2026) 4,651 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಉತ್ತರ ರೈಲ್ವೆ
ಒಟ್ಟು ಹುದ್ದೆಗಳು: 4,651
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 11
ಮೆಕ್ಯಾನಿಕ್, ಎಲೆಕ್ಟ್ರಿಶಿಯನ್, ಫಿಟ್ಟರ್, ವೆಲ್ಡರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೆಹಲಿ, ಲಖನೌ, ಅಂಬಾಲ ಸೇರಿ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು http://rrcnr.org/ ಗೆ ಭೇಟಿ ನೀಡಬಹುದಾಗಿದೆ.



















