ಬೆಂಗಳೂರು: ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸಿರುವ ಘಟನೆ ವಿಜಯನಗರದ ಮುಖ್ಯ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಫೆಬ್ರವರಿ 23ರಂದು ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಗಂಡ–ಹೆಂಡತಿ ಹಾಗೂ ಮೂವರು ಮಕ್ಕಳು ಒಂದೇ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿರುವ ದೃಶ್ಯ ಇತರೆ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಗೊಂಡಿದೆ. ಐವರು ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಂಡು ಇತರೆ ಪ್ರಯಾಣಿಕರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಸಂಚಾರ ನಿಯಮಗಳನ್ನು ಬಾಹಿರವಾಗಿ ಉಲ್ಲಂಘಿಸಿರುವ ಈ ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆಯೂ ಕೇಳಿಬರುತ್ತಿದೆ.
ಅಪಾಯಕಾರಿ ರೀತಿಯ ಪ್ರಯಾಣದಿಂದ ಜೀವಕ್ಕೆ ಅಪಾಯ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು



















