ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೋಟಿಸ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಇಕ್ಬಾಲ್ ಹುಸೇನ್, ಡಿಕೆಶಿ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ನೀವು ನೀಡಿರುವ ಹೇಳಿಕೆಯಿಂದ ಪಕ್ಷಕ್ಕೆ ಗೊಂದಲವಾಗಿದೆ. ಈ ಹೇಳಿಕೆಗೆ ಒಂದು ವಾರದೊಳಗೆ ಸ್ಪಷ್ಟನೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ನೋಟಿಸ್ ನೀಡಿದ್ದಾರೆ.
