ಬೆಂಗಳೂರು: ಸಿಎಂ ವಿರುದ್ಧ ಮುಜುಗರ ತರುವಂಥ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ಕೆಪಿಸಿಸಿ ಶೋಕಾಸ್ ನೋಟಿಸ್ ನೀಡಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಸ್ತು ಪಾಲನಾ ಸಮಿತಿಯ ಸಂಚಾಲಕ ನಿವೇದಿತ್ ಆಳ್ವಾ ನೋಟಿಸ್ ನೀಡಿದ್ದಾರೆ. ಸಿಎಂ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ಹೇಳಿಕೆ ನೀಡಿದ್ದೀರಿ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಲ್ಲದೇ, ಪಕ್ಷದ ಶಿಸ್ತು ಉಲ್ಲಂಘನೆ ಉಂಟಾಗುವಂತೆ ಮಾಡಿದೆ. ಇಂತಹ ಅಶಿಸ್ತಿನ ಹೇಳಿಕೆಗಳನ್ನು ಕೆಪಿಸಿಸಿ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಈ ನೋಟಿಸ್ ತಲುಪಿದ 7 ದಿನಗಳಲ್ಲಿ ತಮ್ಮ ಪ್ರತಿಕ್ರಿಯೆ ನೀಡಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.



















