ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ ವಾಟರ್ ಆ್ಯಂಡ್ ಪವರ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (WAPCOS)ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಡಿಟ್ ಮ್ಯಾನೇಜರ್, ಗ್ರೌಂಡ್ ಸ್ಟಾಫ್, ವಾಟರ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ಹುದ್ದೆ ಹೆಸರು: ವಾಟರ್ ಆ್ಯಂಡ್ ಪವರ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್
ಒಟ್ಟು ಹುದ್ದೆ: 10
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 30
ಆಡಿಟ್ ಮ್ಯಾನೇಜರ್, ಟೀಮ್ ಲೀಡರ್, ಡಿಸಾಸ್ಟರ್ ರಿಸ್ಕ್ ಮ್ಯಾನೇಜ್ ಮೆಂಟ್ ಸ್ಪೆಷಲಿಸ್ಟ್, ವಾಟರ್ ಎಂಜಿನಿಯರ್, ಸ್ಯಾನಿಟೇಷನ್ ಎಂಜಿನಿಯರ್, ಫೀಲ್ಡ್ ಕೋ-ಆರ್ಡಿನೇಟರ್, ಫೀಲ್ಡ್ ಸ್ಟಾಫ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನ್ನಡ ಭಾಷೆ ಮೇಲೆ ಹಿಡಿತದ ಜತೆಗೆ ಇಂಗ್ಲಿಷ್ ಬಲ್ಲವರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ wapcos.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡ ನಂತರ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ wapcosblr.iva@gmail.com ಅಥವಾ wapcosudipi@yahoo.com ಅಥವಾ wapcoscvs@gmail.com ವಿಳಾಸಗಳಿಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.