ವಿಜಯಪುರ : ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಾವಣೆ ಮಾಡಿದನ್ನ ವಿರೋಧಿಸಿ ವಿಜಯಪುರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವಿನೂತನವಾಗಿ ಹೋರಾಟ ನಡೆಸಿದೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತೆಯರು ತಲೆಯ ಮೇಲೆ ಟವೇಲ್, ಬುಟ್ಟಿ ಹೊತ್ತು ಪ್ರತಿಭಟನೆ ನಡೆಸಿದರು. ಈ ವೇಳೆ ನರೇಗಾ ಉಳಿಸಿ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
ಕೇಂದ್ರ ಬಿಜೆಪಿ ಸರ್ಕಾರ ಗಾಂಧಿಜೀ ಹೆಸ್ರು ತೆಗೆಯುವ ಮೂಲಕ ಯೋಜನೆಯನ್ನ ಹಳ್ಳ ಹಿಡಿಸೋ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ : ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ



















