ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ನುಮಾಲಿಗಢ ರಿಫೈನರಿ ಲಿಮಿಟೆಡ್ (NRL GET Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 98 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 10 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನುಮಾಲಿಗಢ ರಿಫೈನರಿ ಲಿಮಿಟೆಡ್ (NRL)
ಒಟ್ಟು ಹುದ್ದೆಗಳು: 98
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 10
ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ (ಸಿವಿಲ್), ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ (ಮೆಕ್ಯಾನಿಕಲ್), ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ (ಇನ್ ಸ್ಟ್ರುಮೆಂಟೇಷನ್), ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ (ಎಲೆಕ್ಟ್ರಿಕಲ್), ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ (ಕೆಮಿಕಲ್), ಗ್ರ್ಯಾಜುಯೇಟ್ ಎಂಜಿನಿಯರ್ ಟ್ರೇನಿ (ಕಂಪ್ಯೂಟರ್ ಸೈನ್ಸ್) ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅಸ್ಸಾಂನಲ್ಲಿರುವ ನುಮಾಲಿಗಢ ರಿಫೈನರಿ ಲಿಮಿಟೆಡ್ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿ.ಟೆಕ್, ಬಿ.ಇ ಸೇರಿ ಯಾವುದೇ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 30 ವರ್ಷದೊಳಿಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 1 ಸಾವಿರ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು nrl.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



















