ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 13 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಭ್ಯರ್ಥಿಗಳು https://ibpsonline.ibps.in/nscfdcfeb25 ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ
ಹುದ್ದೆಗಳ ಹೆಸರು ಸಂಖ್ಯೆ ಸಂಬಳ
ಅಸಿಸ್ಟಂಟ್ ಜನರಲ್ ಮ್ಯಾನೇಜರ್ 01 70,000- 2,00,000 ರೂ.
ಅಸಿಸ್ಟಂಟ್ ಮ್ಯಾನೇಜರ್ 01 30,000 – 1,20,000 ರೂ.
ಜೂನಿಯರ್ ಎಕ್ಸಿಕ್ಯೂಟಿವ್ 02 30,000 – 1,20,000 ರೂ.
ವಿದ್ಯಾರ್ಹತೆ ಏನು?
ಬಿಎ, ಬಿ.ಕಾಂ, ಬಿಎಸ್ಸಿ, ಪಿಜಿ ಪದವಿ, ಸಿಎ, ಐಸಿಡಬ್ಲ್ಯೂಎ, ಎಂ.ಕಾಂ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷ ವಯಸ್ಸಿನ ಮಿತಿ ಇದೆ. ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು ಎಂಬ ನಿಯಮಗಳು ಇವೆ.
ಹಾಗೆಯೇ, ಜಾತಿವಾರು ವಯೋಮಿತಿ ಸಡಿಲಿಕೆ ಇದೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್ ಸಿ, ಎಸ್ ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ. ಮ್ಯಾನೇಜರ್ ಹಂತದ ಹುದ್ದೆಗಳಿಗೆ 600 ರೂ. ಅರ್ಜಿ ಶುಲ್ಕ ಇದ್ದರೆ, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 200 ರೂ. ನಿಗದಿಪಡಿಸಲಾಗಿದೆ. ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ಇದೆ.