ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೈತುಂಬ ಸಂಬಳ ಪಡೆಯುವ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಸಣ್ಣ ಉದ್ಯಮಗಳ ನಿಗಮದಲ್ಲಿ (NSIC Recruitment 2025) ಖಾಲಿ ಇರುವ 70 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಸಣ್ಣ ಉದ್ಯಮಗಳ ನಿಗಮ (NSIC)
ಒಟ್ಟು ಹುದ್ದೆಗಳು: 70
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 16
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಶಾರ್ಟ್ ಲಿಸ್ಟಿಂಗ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬಿ.ಇ, ಬಿ.ಟೆಕ್, ಎಂಬಿಎ, ಸಿಎ, ಡಿಗ್ರಿ, ಎಲ್ ಎಲ್ ಬಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು Deputy General Manager – Human Resources, The National Small Industries Corporation Limited, “NSIC Bhawan”, Okhla Industrial Estate, New Delhi-110020 ವಿಳಾಸಕ್ಕೆ ಕಳುಹಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರಿಗೆ ನವೆಂಬರ್ 26ರವರೆಗೆ ಸಮಯವಿದೆ. ಆನ್ ಲೈನ್ ಮೂಲಕ ಸಲ್ಲಿಸುವವರು nsic.co.inಗೆ ಭೇಟಿ ನೀಡಬಹುದು. ಆನ್ ಲೈನ್ ಮೂಲಕ ನವೆಂಬರ್ 16ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇದನ್ನೂ ಓದಿ:ಬೆಳ್ಳಿಯ ಮೇಲೂ ಇನ್ನು ಸಿಗಲಿದೆ ಸಾಲ: ಈ ಹೊಸ ನಿಯಮಗಳನ್ನು ತಿಳಿದುಕೊಳ್ಳಿ



















