ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 11 ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ (NSIL Recruitment 2026) ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ
ಹುದ್ದೆ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆ: 11
ಉದ್ಯೋಗ ಸ್ಥಳ: ಬೆಂಗಳೂರು ಹಾಗೂ ಅಹಮದಾಬಾದ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 31
ಕರ್ನಾಟಕದ ಬೆಂಗಳೂರು ಹಾಗೂ ಗುಜರಾತ್ ನ ಅಹಮದಾಬಾದ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಂದು ಸೀನಿಯರ್ ಕನ್ಸಲ್ಟಂಟ್, 3 ಕನ್ಸಲ್ಟಂಟ್ ಹಾಗೂ 7 ಯಂಗ್ ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸಿಎ, ಪದವಿ, ಬಿಇ, ಬಿ ಟೆಕ್, ಎಂಬಿಎ, ಎಂಎ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂ.ನಿಂದ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nsilindia.co.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ
Manager-HR & Administration, New Space India Limited, 11th floor, Brigade Rubix, 20, watch Factory Road, Phase-1, Yeshwanthpur, Bengaluru- 560013.
ಇದನ್ನೂ ಓದಿ : ರಿಯಲ್ ಮಿ ನಿಯೋ 8 ಅಬ್ಬರಕ್ಕೆ ಕ್ಷಣಗಣನೆ | M14 ಡಿಸ್‌ಪ್ಲೇಯೊಂದಿಗೆ ಹೊಸ ಕ್ರಾಂತಿ!


















