ಬೆಂಗಳೂರು: ರೈಲ್ವೆ ಸಚಿವಾಲಯವು 2025-26ನೇ ಸಾಲಿನ ಎನ್ ಎಸ್ ಪಿ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ವಿದ್ಯಾರ್ಥಿಗಳಿಗೆ 2,500 ರೂಪಾಯಿ ಹಾಗೂ ವಿದ್ಯಾರ್ಥಿನಿಯರಿಗೆ 3,000 ರೂಪಾಯಿ ಸ್ಕಾಲರ್ ಶಿಪ್ ನೀಡುವ ಯೋಜನೆ ಇದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಪ್ರತಿಯೊಬ್ಬರಿಗೂ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಸಿಗುವುದಿಲ್ಲ. ಬದಲಾಗಿ, ಗೆಜೆಟೆಡ್ ಅಧಿಕಾರಿ ಹುದ್ದೆಗಿಂತ ಕೆಳಗಿರುವ, ಮಾಜಿ ಸೇವೆ ಸಲ್ಲಿಸುತ್ತಿರುವ ಮತ್ತು ಸೇವೆ ಸಲ್ಲಿಸುತ್ತಿರುವ ರೈಲ್ವೆ ರಕ್ಷಣಾ ಪಡೆ (RPF) ಅಥವಾ ರೈಲ್ವೆ ರಕ್ಷಣಾ ವಿಶೇಷ ಪಡೆ (RPSF) ಸಿಬ್ಬಂದಿಯ ಮಕ್ಕಳಿಗೆ ಆರ್ಥಿಕ ನೆರವು ನೀಡುವುದು ಯೋಜನೆಯ ಉದ್ದೇಶವಾಗಿದೆ.
ಅರ್ಜಿ ಸಲ್ಲಿಸುವವರು ಪಿಯುಸಿ, ಡಿಪ್ಲೊಮಾ ಅಥವಾ ಪದವಿಯಂತಹ ಕನಿಷ್ಠ ಪ್ರವೇಶ ಅರ್ಹತೆಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು. AICTE, MCI, UGC, ಅಥವಾ NCTE ನಂತಹ ಸಂಬಂಧಿತ ಸರ್ಕಾರಿ ನಿಯಂತ್ರಕ ಸಂಸ್ಥೆಗಳಿಂದ ಮಾನ್ಯತೆ ಪಡೆದ ವೃತ್ತಿಪರ ಪದವಿ ಕೋರ್ಸ್ಗಳಿಗೆ (BE, B.Tech, BDS, MBBS, BEd, LLB, BCA, MCA, B.Pharma, ಇತ್ಯಾದಿ) ಪ್ರವೇಶ ಪಡೆದಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ https://scholarships.gov.in/ApplicationForm/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅರ್ಹ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಇದಾದ ಬಳಿಕ ಅರ್ಜಿ ಸಲ್ಲಿಸಬೇಕು
ಅರ್ಜಿಗೆ ಅನುಮೋದನೆ ಸಿಕ್ಕ ಬಳಿಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ.