ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ (NTPC Recruitment 2026) 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುವವರಿಗೆ ಒಳ್ಳೆಯ ಅವಕಾಶವಾಗಿದೆ. ಒಂದು ಡಿಪ್ಲೋಮಾ ಟ್ರೈನಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಹುದ್ದೆಗಳ ಹೆಸರು: ಡಿಪ್ಲೋಮಾ ಟ್ರೈನಿ
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 3
ಕರ್ನಾಟಕದ ವಿಜಯಪುರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 24 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ 2 ಮಾದರಿಯ ಆನ್ ಲೈನ್ ಟೆಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ https://ntpc.co.in/ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್



















