ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 265 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1200ರ ಗಡಿ ದಾಟಿದೆ.
ಇಲ್ಲಿಯವರೆಗೆ 550ಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಜನವರಿಯಿಂದ ಇಲ್ಲಿಯವರೆಗೆ 1200 ಜನರಲ್ಲಿ ಕೋವಿಡ್ ಕಾಣಿಸಿಕೊಂಡಿದೆ. 559 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 265 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 7 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಲೆ. 9 ಜನ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಸದ್ಯ ಶೇ. 40.7ರಷ್ಟಿರುವ ಕೊವಿಡ್ ಪಾಸಿಟಿವ್ ರೇಟ್ ಏರಿಕೆಯಾಗಿದೆ



















