ತುಮಕೂರು: ಕೆಲಸ ನಿರ್ವಹಿಸುತ್ತಿದ್ದ ವೇಳೆಯಲ್ಲೇ ನರ್ಸ್ ಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಹಿರಿಹಳ್ಳಿ ಗ್ರಾಮದ ಲತಾ (35) ಹೃದಯಾಘಾತಕ್ಕೆ ಬಲಿಯಾದ ನರ್ಸ್.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೈಟ್ ಶಿಫ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ರಾತ್ರಿ 12 ಗಂಟೆಯ ಸುಮಾರಿಗೆ ಎದೆ ನೋವು ಎಂದು ಕುಸಿದು ಬಿದ್ದು 12.10ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.