ಬೆಂಗಳೂರು: ಅಧಿವೇಶನದಲ್ಲಿ ನಡೆದಿದ್ದ ‘ಅಶ್ಲೀಲ ಸಂಘರ್ಷ’ ಇನ್ನೂ ಮುಗಿಯುವ ಹಂತಕ್ಕೆ ಬಂದು ನಿಲ್ಲುತ್ತಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಶಾಸಕ ಸಿ.ಟಿ. ರವಿಗೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುವಂತೆ ಸವಾಲು ಹಾಕಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿಯ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) , ಮೇಲ್ಮನೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot ) ಅವರನ್ನು ಭೇಟಿ ಮಾಡಿ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸಬೇಕೆಂದು ಮನವಿ ಮಾಡಿದೆ.
ರವಿ ಬಂಧನದಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸರ ನಡೆ ಖಂಡನೀಯ. ಪೊಲೀಸರು ಸರ್ಕಾರದ ಅಣತಿಯಂತೆ ನಡೆದುಕೊಂಡಿದ್ದಾರೆ ಎಂದು ದೂರಿದ್ದಾರೆ.
ಈ ನಿಯೋಜಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಶಾಸಕ ಜನಾರ್ದನ್ ರೆಡ್ಡಿ, ರಘು, ಸಿ ಕೆ ರಾಮಮೂರ್ತಿ ಸೇರಿದಂತೆ ಹಲವರು ಇದ್ದರು.


















