ಬೆಂಗಳೂರು: ವಿಪಕ್ಷಗಳ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ಹೊರಡಿಸಿದ್ದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಮಾನ ಮರ್ಯಾದೆ ಇಲ್ಲದ ಅಶ್ಲೀಲ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಕ್ಕಾಗಿ ಹೋರಾಟ ಮಾಡಿದ್ದು, ನಮ್ಮ ಮೇಲೆ ಗದಪ್ರಹಾರ ಮಾಡಿದ್ದೀರಿ. ಒಬ್ಬ ಮಂತ್ರಿ ಬಂದ ಹನಿಟ್ರ್ಯಾಪ್ ಆಗಿದೆ ಅಂತ ಅಂಗಲಾಚುತ್ತಿದ್ದಾರೆ. ಇದು ಕಾಂಗ್ರೆಸ್‌ನ ಸಿಎಂಗೆ, ಸಚಿವರಿಗೆ ಅಶ್ಲೀಲ ಅಂತ ಅನ್ನಿಸಲೇ ಇಲ್ಲ. ಹನಿ ತಿಂದವರು ಕಾಂಗ್ರೆಸ್‌ನವರು, ಅವರನ್ನ ಅಮಾನತು ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆಯುತ್ತಿದ್ದೀರಿ, ಇದು ಅಶ್ಲೀಲ ಸರ್ಕಾರ, ಮಾನಮರ್ಯಾದೆ ಇಲ್ಲದ ಸರ್ಕಾರ ವಿಧಾನಸಭೆಯಲ್ಲಿ ಅಶೋಕ್ ಕಿಡಿ ಕಾರಿದರು. ವಿಧಾನಸೌಧದಲ್ಲಿ ಶಾಸಕ ವಿಜಯೇಂದ್ರ ಮಾತನಾಡಿ, 18 ಶಾಸಕರನ್ನು ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಸಚಿವ ರಾಜಣ್ಣ ಅವರು ಸದನದಲ್ಲಿ ಅಂಗಲಾಚಿದ್ದಾರೆ. 48ಕ್ಕೂ ಹೆಚ್ಚು ಮುಖಂಡರು ಹನಿಟ್ರ್ಯಾಪ್‌ಗೆ ಒಳಗಾಗಿದ್ದಾರೆ ಅಂತಾರೆ. ಅವರಿಗೆ ರಕ್ಷಣೆ ಕೊಡಬೇಕಾದ ಕರ್ತವ್ಯ ಸಿಎಂ ಅವರದ್ದಾಗಿತ್ತು ಎಂದಿದ್ದಾರೆ.