ಮಹಿಳೆಯರ ಅಶ್ಲೀಲ ಫೋಟೋ ಹಾಗೂ ವೀಡಿಯೋಗಳನ್ನು ಪೋಸ್ಟ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವ ಆರೋಪಿಯನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಇನ್ಸ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪಿ ಗುರುದೀಪ್ ಸಿಂಗ್ ಅರೆಸ್ಟ್ ಆಗಿರುವ ವ್ಯಕ್ತಿ. ಪೊಲೀಸರು ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಹಲವು ಮಹಿಳೆಯರ ಹಾಗೂ ಯುವತಿಯರ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಲಲ್ಲಿ ಪೋಸ್ಟ್ ಮಾಡುತ್ತಿದ್ದ. ಆರೋಪಿ ಪೋಸ್ಟ್ ಮಾಡ್ತಿದ್ದ ಅಶ್ಲೀಲ ವೀಡಿಯೋ ವೈರಲ್ ಆಗುತ್ತಿತ್ತು.
ಸದ್ಯ ಆರೋಪಿಯನ್ನು ಬನಶಂಕರಿ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಬಂಧಿತ ಆರೋಪಿ ಕೆಆರ್ ಪುರಂನಲ್ಲಿ ತನ್ನ ಸಹೋದರನೊಂದಿಗೆ ವಾಸವಿದ್ದನೆಂದು ತಿಳಿದು ಬಂದಿದೆ.



















