ನಟಿ ರಮ್ಯಾ ವಿರುದ್ದ ಅಶ್ಲೀಲ ಪೋಸ್ಟ್ ಹಾಕಿದ ಕಿಡಿಗೇಡಿಗಳು ಈಗಾಗಲೇ ಜೈಲು ಸೇರಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರನ ವಿರುದ್ಧ ಅಶ್ಲೀಲ ಪೋಸ್ಟ್ ಹಾಕುತ್ತಿರುವ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಸಾಮಾಜಿಕ ಹೋರಾಟಗಾರ ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರಿಗೆ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರನ ವಿರುದ್ಧ ಅಶ್ಲೀಲ್ ಪೋಸ್ಟ್ ಗಳನ್ನು ಮಾಡಲಾಗುತ್ತಿದೆ. ಅಂತಹ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಮಹಿಳಾ ಆಯೋಗ ಕೂಡ ಗರಂ ಆಗಿದ್ದು, ಅವಹೇಳನಕಾರಿ ಪೋಸ್ಟ್ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.


















