ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವಾಚ್ಯ ಮತ್ತು ಅಶ್ಲೀಲ ಪದ ಬಳಕೆಯ ಹಾಡುಗಳನ್ನು ಮನರಂಜನಾ ಕಾರ್ಯಕ್ರಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂಥಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗವು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರದ ಮೂಲಕ ಮನವಿ ಮಾಡಿದೆ.

ಪ್ರಸ್ತುತ, ಅವಾಚ್ಯ ಮತ್ತು ಅಶ್ಲೀಲ ಪದಗಳ ಬಳಕೆಯ ಹಾಡುಗಳನ್ನು ಮನರಂಜನಾ ಕಾರ್ಯಕ್ರಮಗಳಲ್ಲಿ ಹಾಡುತ್ತಿದ್ದು, ಸೋಶಿಯಲ್ ಮೀಡಿಯಾಗಳಲ್ಲಿಯೂ ಹರಿ ಬಿಡುತ್ತಿರುವ ಕುರಿತು ಆಯೋಗಕ್ಕೆ ದೂರುಗಳು ಹೆಚ್ಚಾಗಿ ಬರುತ್ತಿದೆ. ಈ ರೀತಿಯ ಹಾಡುಗಳ ಸಾಹಿತ್ಯಗಳಿಂದ ಮಹಿಳೆಯರಿಗೆ ಹಾಗೂ ಶಾಲಾ ಹೆಣ್ಣು ಮಕ್ಕಳು ತೀವ್ರವಾಗಿ ಮುಜುಗರಕ್ಕೆ ಒಳಗಾಗುತ್ತಿದ್ದಾರೆ.
ಹೀಗಾಗಿ ಈ ಬಗ್ಗೆ ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಮತ್ತು ರಾಜ್ಯದಲ್ಲಿ ಎಲ್ಲಿಯೂ ಸಹ ಈ ರೀತಿಯ ಘಟನೆಗಳು ನಡೆಯದಂತೆ ತಡೆಗಟ್ಟಲು ರಾಜ್ಯದ ಎಲ್ಲಾ ಪೊಲೀಸ್ ಠಾಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕೆಂದು ಪತ್ರದಲ್ಲಿ ಆಯೋಗ ತಿಳಿಸಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ NSIL ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : 2.2 ಲಕ್ಷ ರೂ. ಸಂಬಳ



















