ಮೈಸೂರು: ಇತ್ತೀಚೆಗಷ್ಟೇ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದರು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ಇಂತಹ ಘಟನೆ ಬೆಳಕಿಗೆ ಬಂದಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕರುವಿನ ಬಾಲ ತುಂಡರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹರಕೆಗಾಗಿ ಬಿಟ್ಟ ಕರುವಿನ ಬಾಲ ತುಂಡರಿಸಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.
ಪರಶುರಾಮ ದೇಗುಲದ ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ದಾಳಿ ಮಾಡಿ ಪರಾರಿಯಾಗಿದ್ದಾರೆ. ರಕ್ತಸಿಕ್ತವಾಗಿದ್ದ ಕರು ಕಂಡ ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ನಂಜನಗೂಡಿನ ಹಳ್ಳದ ಕೇರಿಯ ರಾಮಮಂದಿರದ (Ram temple) ಬಳಿ ಕರುವಿನ ಆರೈಕೆ ಮಾಡಲಾಗುತ್ತಿದೆ