ಮೈಸೂರು: ಜನನ- ಮರಣ ಪತ್ರ ಪಡೆಯಲು ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ಈ ಘಟನೆ ನಡೆದಿದೆ. ಕೇಸ್ ವರ್ಕರ್ ಮೋಹನ್ ಸಿಕ್ಕಿ ಬಿದ್ದಿರುವ ಅಧಿಕಾರಿ. ಜನನ ಮರಣ ಪತ್ರ ನೀಡಲು ಹಣ ಕೇಳಿದ ಆರೋಪ ಕೇಳಿ ಬಂದಿದ್ದು, ಹಣ ನೀಡಿದರೂ ರಶೀದಿ ಕೊಡದೆ ವಂಚಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಹಣ ಪಡೆಯುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರೈತನ ಮೊಬೈಲ್ ನಲ್ಲಿ ವಿಡಿಯೋ ಸೆರೆಯಾಗಿದೆ. ಇದನ್ನು ಕಂಡು ಜನರು ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.



















