ಬೆಂಗಳೂರು: ಕೇಂದ್ರ ಸರ್ಕಾರಿ ಸಂಸ್ಥೆಯಾಗಿರುವ ಆಯಿಲ್ ಇಂಡಿಯಾದಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಕಂಪನಿಯಲ್ಲಿ 102 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Oil India recruitment 2025) ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಆಯಿಲ್ ಇಂಡಿಯಾ
ಒಟ್ಟು ಹುದ್ದೆಗಳು: 102
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 26
ಉದ್ಯೋಗದ ಸ್ಥಳ: ದೇಶಾದ್ಯಂತ
ಸೀನಿಯರ್ ಆಫೀಸರ್, ಹಿಂದಿ ಆಫೀಸರ್, ಸೂಪರಿಂಟೆಂಡಿಂಗ್ ಇಂಜಿನಿಯರ್, ಕಾನ್ಫಿಡೆನ್ಷಿಯಲ್ ಸೆಕ್ರಟರಿ ಸೇರಿ ಒಟ್ಟು 102 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು B.Tech/B.E, LLB, M.A, M.Sc, M.E/M.Tech, MBA/PGDM, ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಸೂಪರಿಂಟೆಂಡಿಂಗ್ ಇಂಜಿನಿಯರ್ (ಪ್ರೊಡಕ್ಷನ್) : 03
ಸೀನಿಯರ್ ಆಫೀಸರ್ : 97
ಕಾನ್ಫಿಡೆನ್ಷಿಯಲ್ ಸೆಕ್ರಟರಿ : 01
ಹಿಂದಿ ಆಫೀಸರ್ (ಅಧಿಕೃತ ಭಾಷೆ) : 01
ನೇಮಕಾತಿ ಹೊಂದಿದವರಿಗೆ ಮಾಸಿಕ 80 ಸಾವಿರ ರೂ.ನಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. 27ರಿಂದ 42 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು oil-india.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.