1999ರಲ್ಲಿ ಕಾರ್ಗಿಲ್ ಯುದ್ಧ ನಡೆದಿತ್ತು. ಆ ಸಂದರ್ಭದಲ್ಲಿ ಯುದ್ಧದಲ್ಲಿ ಭಾರತೀಯ ಸೈನಿಕರು ಗಾಯಗೊಂಡಿದ್ದು, ಇಂದಿನ ಪ್ರಧಾನಿ ಮೋದಿ ಅಂದು ಸೈನಿಕರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದರು. ಸದ್ಯ ಈ ವಿಷಯ ಈಗ ವೈರಲ್ ಆಗುತ್ತಿದೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಕಾರ್ಗಿಲ್ ನಲ್ಲಿ ಯುದ್ಧ ನಡೆದಿತ್ತು. ಯುದ್ಧದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಅವರ ಉತ್ಸಾಹವನ್ನು ಹೆಚ್ಚಿಸುವ ಕೆಲಸ ಮಾಡಿದ್ದರು ಎಂದು ನಿವೃತ್ತ ಮೇಜರ್ ಜನರಲ್ ವಿಜಯ್ ಜೋಶಿ ಹೇಳಿದ್ದಾರೆ.
ಯುದ್ಧದ ಸಮಯದಲ್ಲಿ ಕಾಶ್ಮೀರಕ್ಕೆ ಭೇಟಿ ನೀಡಿದಾಗ, ಉಧಮ್ ಪುರ ಕಮಾಂಡ್ ಆಸ್ಪತ್ರೆಯಲ್ಲಿ ಗಾಯಗೊಂಡ ಸೈನಿಕರ ಆರೋಗ್ಯ ವಿಚಾರಿಸಿದ್ದರು. ಅಂದು ಮೋದಿ ಅವರೊಂದಿಗೆ ಮೇಜರ್ ಜನರಲ್ ವಿಜಯ್ ಜೋಶಿ ಕೂಡ ಇದ್ದರು. ಇಂದು 25ನೇ ಕಾರ್ಗಿಲ್ ವಿಜಯ್ ದಿವಸವನ್ನು ಇಡೀ ದೇಶವೇ ಆಚರಿಸುತ್ತಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರನ್ನು ಪ್ರತಿಯೊಂದು ಭಾರತೀಯ ಆತ್ಮ ನೆನೆದು ಕಣ್ಣೀರು ಸುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದ್ರಾಸ್ಗೆ ಭೇಟಿ ನೀಡಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.

ಉಧಂಪುರದ ಮಿಲಿಟರಿ ಕಮಾಂಡ್ ಆಸ್ಪತ್ರೆಯ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ ಮೇಜಯ್ ಜನರಲ್ ವಿಜಯ್ ಜೋಶಿ ಅವರು 1999ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನರೇಂದ್ರ ಮೋದಿ ಅವರು ಗಾಯಗೊಂಡ ಮತ್ತು ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಭೇಟಿ ಮಾಡಿದ ಕ್ಷಣವನ್ನು ನೆನೆಸಿಕೊಂಡರು.