ಬೆಂಗಳೂರು : ದೇಶದಲ್ಲೇ ಸರ್ಕಾರಿ ವಲಯದ ಬೃಹತ್ ತೈಲ ಹಾಗೂ ನೈಸರ್ಗಿಕ ಅನಿಲ ಉತ್ಪಾದನಾ ಕಂಪನಿಯಾಗಿರುವ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ (ONGC Recruitment 2026) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 15
ಉದ್ಯೋಗದ ಸ್ಥಳ: ಸೂರತ್- ಗುಜರಾತ್
ಗರಿಷ್ಠ 65 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 66 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ongcindia.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Office of the Head-HR-ER, First Floor, Admin Building, ONGC Hazira Plant PO ONGC Nagar, Bhatpore, Surat-394550. ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅರ್ಜಿಯ ಸಮೇತ hr_hazira@ongc.co.in ಗೂ ಇ-ಮೇಲ್ ಮಾಡಬಹುದು.
ಇದನ್ನೂ ಓದಿ : ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!



















